ಶ್ರೀನಗರ (Srinagar)- ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಲಷ್ಕರ್ ಎ ತಯಬಾದ (ಎಲ್ಇಟಿ) ನಾಲ್ವರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.
ಶ್ರೀನಗರದ ಸೌರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಂದು ಎಕೆ–47 ಬಂದೂಕು ಹಾಗೂ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಅವಂತಿಪೊರಾದಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಉಗ್ರರು ಕಲಾವಿದೆ ಅಮ್ರೀನ್ ಭಟ್ ಹತ್ಯೆ ಪ್ರಕರಣದಲ್ಲಿ ನಂಟು ಹೊಂದಿದ್ದರು ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಕಲಾವಿದೆ ಅಮ್ರೀನ್ ಭಟ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಮೇ 25ರಂದು ಉಗ್ರರು ಹತ್ಯೆ ಮಾಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದ ಅಮ್ರೀನ್ ಭಟ್, ಅವರ ಗಾಯನ, ಕಿರುಚಿತ್ರ ಸೇರಿದಂತೆ ಹಲವು ಪೋಸ್ಟ್ಗಳನ್ನು ಹಂಚಿಕೊಂಡಿದ್ದರು.
ಒಟ್ಟಾರೆಯಾಗಿ ಕಳೆದ ಮೂರು ದಿನಗಳಲ್ಲಿ 10 ಮಂದಿ ಭಯೋತ್ಪಾಕರನ್ನು ಹತ್ಯೆ ಮಾಡಲಾಗಿದೆ ಎಂದು ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.