ಮನೆ ಅಪರಾಧ ಜಮ್ಮು ಕಾಶ್ಮೀರದಲ್ಲಿ ಮೂವರು ಉಗ್ರರ ಬಂಧನ

ಜಮ್ಮು ಕಾಶ್ಮೀರದಲ್ಲಿ ಮೂವರು ಉಗ್ರರ ಬಂಧನ

0

ಶ್ರೀನಗರ(Shreenagar): ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಲಷ್ಕರ್‌–ಎ–ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ.

ಬುದ್ಗಾಮ್‌ನ ವಾಟರ್‌ಹೇಲ್ ಪ್ರದೇಶದಲ್ಲಿ ಉಗ್ರರು ನೆಲೆಗೊಂಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿವೆ.

ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಮಾತನಾಡಿ, ಬಂಧಿತ ಉಗ್ರ ಲತೀಫ್ ರಾಥರ್, ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮತ್ತು ಅಮ್ರೀನ್ ಭಟ್ ಸೇರಿದಂತೆ ಹಲವಾರು ನಾಗರಿಕರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಬುದ್ಗಾಮ್‌ನಲ್ಲಿ ಕಂದಾಯ ಇಲಾಖೆಯ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಖಂಡಿಸಿ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಸದ್ಯ ಬಂಧಿಸಿರುವ ಉಗ್ರರ ಬಳಿ 5 ಪಿಸ್ತೂಲ್‌ಗಳು, 5 ಮ್ಯಾಗಜಿನ್‌ಗಳು, 50 ಗುಂಡುಗಳು ಸೇರಿದಂತೆ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಹಿಂದಿನ ಲೇಖನಎನ್ಐಟಿಕೆಯಲ್ಲಿ 14 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಸ್ವಾತಂತ್ರ್ಯ ದಿನದಂದು ಸಾಂವಿಧಾನಿಕ ಮೌಲ್ಯಗಳನ್ನು ಪೂರೈಸುವಲ್ಲಿ ಪ್ರಗತಿಯ ಬಗ್ಗೆ ವಿಮರ್ಶಾತ್ಮಕವಾಗಿ ಆತ್ಮಾವಲೋಕನ ಮಾಡಿ: ನ್ಯಾಯಮೂರ್ತಿ ಡಿವೈ ಚಂದ್ರಚೂಡ್