ಮನೆ ರಾಷ್ಟ್ರೀಯ ಭದ್ರತಾ ಪಡೆಯಿಂದ ಎನ್‌ ಕೌಂಟರ್:‌ ಓರ್ವ ಉಗ್ರನ ಹತ್ಯೆ

ಭದ್ರತಾ ಪಡೆಯಿಂದ ಎನ್‌ ಕೌಂಟರ್:‌ ಓರ್ವ ಉಗ್ರನ ಹತ್ಯೆ

0

ಶ್ರೀನಗರ (Srinagar)- ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್‌ ನಲ್ಲಿ ಹತನಾದ ಉಗ್ರ  ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವನಾಗಿದ್ದಾನೆ.

 ನಡೆದಿದೆ. ಕುಲ್ಗಾಮ್‌ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಸೇನೆಯೂ ಪ್ರತಿ ದಾಳಿ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದಿನ ಲೇಖನಹಾಲು ಒಕ್ಕೂಟದಲ್ಲಿ ಒಂದು ಹುದ್ದೆಗೆ 25 ರಿಂದ 50 ಲಕ್ಷ ರೂ. ವರೆಗೆ ಲಂಚ: ಎಚ್.ಡಿ.ಕುಮಾರಸ್ವಾಮಿ
ಮುಂದಿನ ಲೇಖನಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌: ಸತತ 3ನೇ ಬಾರಿ ಚಿನ್ನ ಗೆದ್ದ ಇತಿಹಾಸ ಸೃಷ್ಟಿಸಿದ ರವಿ ಕುಮಾರ್ ದಹಿಯಾ