ಮನೆ ರಾಜಕೀಯ ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ: ಪ್ರತಾಪ್ ಸಿಂಹ

ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ: ಪ್ರತಾಪ್ ಸಿಂಹ

0

ಮೈಸೂರು: ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

Join Our Whatsapp Group

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, . ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ. ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ಪಿಎಸ್ ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಹೇಳಿದರು.

ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಹಿಂದಿನ ಲೇಖನಮೈಸೂರು: ಕಾಡಾನೆ ದಾಳಿಗೆ ರೈತ ಬಲಿ
ಮುಂದಿನ ಲೇಖನಪದವಿ ಪೂರ್ವ ಕಾಲೇಜುಗಳ ಸ್ಥಿತಿಗತಿ ಬಗ್ಗೆ ಸಮಗ್ರ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ