ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ರಾಜ್ಯವನ್ನು ಕಂಗೆಡಿಸಿವೆ. ಒಂದೇ ಕಾಲೇಜು ಹಾಸ್ಟೆಲ್‌ನಲ್ಲಿ ಎರಡು ದಿನಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ದಾರುಣ ಘಟನೆಗಳು ಶಿಕ್ಷಣ ವ್ಯವಸ್ಥೆ, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹಾಗೂ ಹಾಸ್ಟೆಲ್ ಪರಿಸರದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ.
ಇತ್ತೀಚೆಗೆ ರಾಯಚೂರು ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಹೊರಬಿದ್ದಿದೆ. ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬ ವಿದ್ಯಾರ್ಥಿ, ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ಎಐ ಅಂಡ್ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಶುಕ್ರವಾರ ರಾತ್ರಿ 8:30ರ ಸಮಯದಲ್ಲಿ ಯಶ್ವಂತ್ ಅವರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಜೀವನ ಅಂತ್ಯ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ದುರ್ಘಟನೆ ಹಿನ್ನೆಲೆಗೆ ನಿಖರವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಆರಂಭಿಸಲಾಗಿದೆ.















