ಮನೆ ಕ್ರೀಡೆ ಭಾರತ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

ಭಾರತ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

0

ನವದೆಹಲಿ (New Delhi): ಭಾರತ ತಂಡದ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌ ತಂಡ ಪ್ರಕಟಗೊಂಡಿದೆ.

ಜುಲೈ 1ರಿಂದ 5ರವರೆಗೆ ಎಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ 5ನೇ ಹಾಗೂ ಸರಣಿ ನಿರ್ಣಾಯಕ ಅಂತಿಮ ಟೆಸ್ಟ್‌ ಪಂದ್ಯವನ್ನಾಡಲಿದೆ. ಅದಕ್ಕಾಗಿ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ತನ್ನ ಬಲಿಷ್ಠ ತಂಡವನ್ನು ಪ್ರಕಟ ಮಾಡಿದೆ.

ಸದ್ಯ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ ಅತ್ಯಂತ ಅಪಾಯಕಾರಿ ತಂಡವಾಗಿ ಹೊರಹೊಮ್ಮಿದೆ. ಅತ್ತ ಗಾಯದ ಸಮಸ್ಯೆಗಳು ಮತ್ತು ಕೋವಿಡ್‌-19 ಕಾರಣ ಪ್ರಮುಖ ಆಟಗಾರರ ಸೇವೆ ಕಳೆದುಕೊಂಡಿರುವ ಟೀಮ್ ಇಂಡಿಯಾ ಎದುರು ಈ ಇಂಗ್ಲೆಂಡ್‌ ತಂಡ ಫೈನಲ್‌ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಫೇವರಿಟ್‌ ಪಟ್ಟ ಪಡೆದುಕೊಂಡಿದೆ. ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಅವರಲ್ಲೂ ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿದ್ದು, ಫೈನಲ್‌ ಟೆಸ್ಟ್‌ನಲ್ಲಿ ಆಡುತ್ತಾರೊ ಇಲ್ಲವೋ ಎಂಬುದು ಖಾತ್ರಿಯಾಗಿಲ್ಲ.

ಇಂಗ್ಲೆಂಡ್‌ ಟೆಸ್ಟ್‌ ತಂಡ

ಬೆನ್‌ ಸ್ಟೋಕ್ಸ್‌ (ನಾಯಕ), ಜೋ ರೂಟ್‌, ಜೇಮ್ಸ್‌ ಆಂಡರ್ಸನ್‌, ಜಾನಿ ಬೈರ್‌ಸ್ಟೋವ್‌, ಸ್ಯಾಮ್‌ ಬಿಲ್ಲಿಂಗ್ಸ್‌, ಸ್ಟುವರ್ಟ್‌ ಬ್ರಾಡ್‌, ಹ್ಯಾರಿ ಬ್ರೂಕ್ಸ್‌, ಜಾಕ್‌ ಕ್ರಾವ್ಲೀ, ಬೆನ್‌ ಫೋಕ್ಸ್, ಜಾಕ್‌ ಲೀಚ್‌, ಅಲೆಕ್ಸ್‌ ಲೀಸ್‌, ಕ್ರೇಗ್‌ ಓವರ್ಟರ್ನ್, ಜೇಮಿ ಓವರ್ಟರ್ನ್, ಮ್ಯಾಥ್ಯೂ ಪಾಟ್ಸ್‌ ಮತ್ತು ಓಲ್ಲೀ ಪೋಪ್.

ಐದನೇ ಟೆಸ್ಟ್‌ಗೆ ಭಾರತ ತಂಡ

ರೋಹಿತ್‌ ಶರ್ಮಾ (ನಾಯಕ), ಜಸ್‌ಪ್ರೀತ್‌ ಬುಮ್ರಾ (ಉಪನಾಯಕ), ಶುಭಮನ್‌ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ಚೇತೇಶ್ವರ್‌ ಪೂಜಾರ, ರವೀಂದ್ರ ಜಡೇಜಾ, ಆರ್‌ ಅಶ್ವಿನ್‌, ರಿಷಭ್ ಪಂತ್‌ (ವಿಕೆಟ್‌ಕೀಪರ್), ಶ್ರೀಕರ್‌ ಭರತ್‌ (ವಿಕೆಟ್‌ಕೀಪರ್), ಶಾರ್ದುಲ್‌ ಠಾಕೂರ್‌, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, ಪ್ರಸಿಧ್ ಕೃಷ್ಣ, ಮೊಹಮ್ಮದ್‌ ಸಿರಾಜ್. ಬ್ಯಾಕಪ್‌ ಓಪನರ್‌: ಮಯಾಂಕ್ ಅಗರ್ವಾಲ್‌.