ಮನೆ ಹವಮಾನ ಮೇ 31ಕ್ಕೆ ನೈರುತ್ಯ ಮುಂಗಾರು ಪ್ರವೇಶ: ವಾಡಿಕೆಗಿಂತ ಹೆಚ್ಚು ವರ್ಷಧಾರೆ ಸಾಧ್ಯತೆ

ಮೇ 31ಕ್ಕೆ ನೈರುತ್ಯ ಮುಂಗಾರು ಪ್ರವೇಶ: ವಾಡಿಕೆಗಿಂತ ಹೆಚ್ಚು ವರ್ಷಧಾರೆ ಸಾಧ್ಯತೆ

0

ನವದೆಹಲಿ: ಈ ಬಾರಿ ಸಮಯಕ್ಕಿಂತ ಮುಂಚಿತವಾಗಿಯೇ ಮುಂಗಾರಿನ ಆಗಮನವಾಗಲಿದೆ. ನೈಋತ್ಯ ಮುಂಗಾರು ಮೇ 31ಕ್ಕೆ ಕೇರಳ ತಲುಪುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಮೇ 19ರಂದು ಅಂಡಮಾನ್ ನಿಕೋಬಾರ್ ತಲುಪುವ ಸಾಧ್ಯತೆಯಿದೆ.

Join Our Whatsapp Group

ಈ ಕುರಿತು ಬುಧವಾರ ರಾತ್ರಿ ಮಾಹಿತಿ ನೀಡಿರುವ ಇಲಾಖೆ, ಇದೇ 31ಕ್ಕೆ ಕೇರಳ ರಾಜ್ಯವನ್ನು ಮುಂಗಾರು ಪ್ರವೇಶಿಸಲಿದ್ದು, ನಾಲ್ಕು ದಿನ ಹೆಚ್ಚೂ ಕಡಿಮೆ ಆಗಬಹುದು. ಆದರೆ ಈ ಬಾರಿಯ ನಾಲ್ಕು ತಿಂಗಳ ಮಳೆಗಾಲ ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ಚೈತನ್ಯ ನೀಡಲಿದೆ ಎಂದು ಹೇಳಿದೆ.

ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಪ್ರತಿಕ್ರಿಯಿಸಿ, “ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಮಾನ್ಯ ದಿನಾಂಕ ಜೂನ್ 1 ಆಗಿರುವುದರಿಂದ ಇದು ಆ ದಿನಕ್ಕೆ ಹತ್ತಿರವಾಗಿದೆ. ಅಲ್ಲದೇ ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಬಹುದು ಎಂದು ಕಳೆದ ತಿಂಗಳು ನಮ್ಮ ಇಲಾಖೆ ಹೇಳಿತ್ತು. ಅದಕ್ಕೆ ಪೂರಕವಾಗಿ ಮುಂಗಾರು ಚಲನೆ ಕಂಡುಬಂದಿದೆ” ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಮುಂಗಾರು ಪ್ರವೇಶದ ಸಮಯವು ಕಳೆದ 150 ವರ್ಷಗಳಿಂದ ಬದಲಾಗುತ್ತಿದೆ. 1918ರಲ್ಲಿ ಮುಂಗಾರು ಮೇ 11ರಂದು ರಾಜ್ಯ ಪ್ರವೇಶಿಸಿತ್ತು. ನಂತರದಲ್ಲಿ 1972 ಜೂನ್ 18, 2020ರ ಜೂನ್ 1, 2021ರ ಜೂನ್ 3, 2022ರಲ್ಲಿ ಮೇ 29, ಕಳೆದ ವರ್ಷ ಜೂನ್ 8ರಂದು ಮುಂಗಾರು ಮಳೆಯ ಪ್ರವೇಶವಾಗಿತ್ತು. ಈ ಬಾರಿ ಮುಂಚಿತವಾಗಿಯೇ ಮುಂಗಾರಿನ ಆಗಮನದಿಂದ ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿಗೆ ಹೋಲಿಸಿದರೆ ಈ ಋತುವಿನಲ್ಲಿ ಹೆಚ್ಚಿನ ಮಳೆಯನ್ನು ಭಾರತ ದಾಖಲಿಸುವ ಸಾಧ್ಯತೆ ಇದೆ. ವಾಯುವ್ಯ, ಪೂರ್ವ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಹಿಂದಿನ ಲೇಖನಕುಷ್ಟಗಿ: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಮುಂದಿನ ಲೇಖನಠಾಣೆಯಲ್ಲಿ ಸಿವಿಲ್ ವ್ಯಾಜ್ಯ ತೀರ್ಮಾನಿಸಲು ಪೊಲೀಸರಿಗೆ ಅಧಿಕಾರ ನೀಡಿದವರು ಯಾರು?: ಹೈಕೋರ್ಟ್‌ ಆಕ್ರೋಶ