ಮನೆ ರಾಷ್ಟ್ರೀಯ ಪರಿಸರ ಸೂಚ್ಯಂಕ: ಭಾರತಕ್ಕೆ ಕೊನೆಯ ಸ್ಥಾನ

ಪರಿಸರ ಸೂಚ್ಯಂಕ: ಭಾರತಕ್ಕೆ ಕೊನೆಯ ಸ್ಥಾನ

0

ನವದೆಹಲಿ (New Delhi): ಈ ಸಾಲಿನ ಪರಿಸರ ಕಾರ್ಯದಕ್ಷತೆ ಸೂಚ್ಯಂಕದಲ್ಲಿ (ಇಪಿಐ) ಭಾರತಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. ಡೆನ್ಮಾರ್ಕ್ ಮೊದಲ ಸ್ಥಾನದಲ್ಲಿದೆ.

ಕೊಲಂಬಿಯಾ ವಿಶ್ವವಿದ್ಯಾಲಯದ ಪರಿಸರ ಕಾನೂನು ಮತ್ತು ನೀತಿ ಅಧ್ಯಯನ ಕೇಂದ್ರ ಮತ್ತು ಭೂವಿಜ್ಞಾನ ಮಾಹಿತಿ ಜಾಲ ಕೇಂದ್ರವು ನಡೆಸಿದ ಅಧ್ಯಯನದ ಆಧಾರದಲ್ಲಿ ಈ ಸೂಚ್ಯಂಕ ನೀಡಲಾಗಿದೆ.

ಭಾರತ ಅತ್ಯಂತ ಕಡಿಮೆ ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ. ಅತಿ ಹೆಚ್ಚು ಅಂಕಗಳೊಂದಿಗೆ ಡೆನ್ಮಾರ್ಕ್‌ ಮೊದಲ ಸ್ಥಾನದಲ್ಲಿದೆ.

ಒಟ್ಟು 180 ದೇಶಗಳನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಪ್ರತಿ ದೇಶಗಳ ಸುಸ್ಥಿರ ಅಭಿವೃದ್ಧಿ ಮಾದರಿಗಳು ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿ ಈ ಸೂಚ್ಯಂಕ ಸಿದ್ಧಪಡಿಸಲಾಗಿದೆ.

ಒಟ್ಟು ಅಂಕಗಳಲ್ಲಿ 18.9 ಅಂಕಗಳನ್ನು ಪಡೆದ ಭಾರತವು 180ನೇ ಸ್ಥಾನದಲ್ಲಿದೆ. ಭಾರತವು ಮಾಲಿನ್ಯ ನಿಯಂತ್ರಣಕ್ಕಿಂತ, ಆರ್ಥಿಕ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಹೀಗಾಗಿ ಅತ್ಯಂತ ಕಡಿಮೆ ಅಂಕಗಳನ್ನು ಪಡೆದಿದೆ ಎಂದು ಸೂಚ್ಯಂಕ ವರದಿಯಲ್ಲಿ ವಿವರಿಸಲಾಗಿದೆ.

20.1 ಅಂಕ ಪಡೆದಿರುವ ವಿಯೆಟ್ನಾಂ, 23.1 ಅಂಕ ಪಡೆದಿರುವ ಬಾಂಗ್ಲಾದೇಶ ಮತ್ತು 24.6 ಅಂಕ ಪಡೆದಿರುವ ಪಾಕಿಸ್ತಾನವು ಕ್ರಮವಾಗಿ 179, 178 ಮತ್ತು 177ನೇ ಸ್ಥಾನ ಪಡೆದಿವೆ. 28.4 ಅಂಕ ಪಡೆದಿರುವ ಚೀನಾ 161ನೇ ಸ್ಥಾನದಲ್ಲಿದೆ. ರಷ್ಯಾವು 112ನೇ ಸ್ಥಾನದಲ್ಲಿದ್ದರೆ, ಅಮೆರಿಕವು 20ನೇ ಸ್ಥಾನದಲ್ಲಿದೆ.