ಚಿಕ್ಕಬಳ್ಳಾಪುರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ದ್ವಿತೀಯ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳವಾರ ನಡೆದಿದೆ. ಪೆಟ್ರೋಲ್ ಬಂಕ್ ಗೆ ಎನ್ ಒಸಿ ನೀಡಲು 30 ಸಾವಿರ ರೂ ಲಂಚ ಸ್ಪೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಖಾಜವಲಿ ಹಣದ ಸಮೇತ ಸಿಕ್ಕಿ ಬಿದ್ದಿದ್ದಾರೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರಿನ ಶ್ರೀನಾಥ್ ಎಂಬುವರು ಈ ಬಗ್ಗೆ ಲೋಕಾಯುಕ್ತರಿಗೆ ಹಣದ ಬೇಡಿಕೆ ಬಗ್ಗೆ ದೂರು ಸಲ್ಲಿಸಿದ್ದರು.
ಮಂಗಳವಾರ ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಹಣ ಸ್ಪೀಕರಿಸುವ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.