ಹುಬ್ಬಳ್ಳಿ(Hubballi): ಸತತವಾಗಿ ಮೂರನೇ ಬಾರಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ನೂತನ ಮೇಯರ್ ಆಗಿ ಈರೇಶ ಅಂಚಟಗೇರಿ ಹಾಗೂ ಉಪಮೇಯರ್ ಆಗಿ ಉಮಾ ಮುಕುಂದ್ ಆಯ್ಕೆಯಾಗಿದ್ದಾರೆ.
ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಇಂದು ಮಹಾನಗರ ಪಾಲಿಕೆಯಲ್ಲಿ ಕೈ ಎತ್ತುವ ಮೂಲಕ ಮತದಾನ ಪ್ರಕ್ರಿಯೆ ನಡೆದಿದೆ.
ಮತದಾನದಲ್ಲಿ ಪಾಲಿಕೆಯ ಸದಸ್ಯರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಜಗದೀಶ್ ಶೆಟ್ಟರ್ ಸೇರಿದಂತೆ ಪಾಲಿಕೆಯ ವ್ಯಾಪ್ತಿಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.