Saval TV on YouTube
ಅಹಮದಾಬಾದ್(Ahmadabad) : ಈರೋಡ್’ನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ. ಶಕ್ತಿವೇಲ್ ಆತ್ಮಹತ್ಯೆಗೆ ಶರಣಾದ ವೈದ್ಯ.
ಶುಕ್ರವಾರ ಮನೆಯ ಒಳಗಿದ್ದ ಶಕ್ತಿವೇಲ್ ಹೊರಗೆ ಬಂದಿರಲಿಲ್ಲ. ಈ ವೇಳೆ ಅನುಮಾನಗೊಂಡ ಅಕ್ಕಪಕ್ಕದವರು ಮನೆಯೊಳಗೆ ಹೋಗಿ ನೋಡಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಈರೋಡ್ ಉತ್ತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶಕ್ತಿವೇಲ್ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ನಂತರ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಈರೋಡ್ ಸರ್ಕಾರಿ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಶಕ್ತಿವೇಲ್ ದಂಪತಿ ತಮ್ಮ ಹತ್ತು ವರ್ಷದ ಮಗನೊಂದಿಗೆ ಅಹಮದಾಬಾದ್ ಸಮೀಪ ನ್ಯೂ ಟೀಚರ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು.