ಮನೆ ರಾಜ್ಯ ರಾಜ್ಯದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಡಿ.ಕೆ ಶಿವಕುಮಾರ್

0

ಬೆಂಗಳೂರು: ರಾಜ್ಯದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ತೆರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಅಥವಾ ಮಾನದಂಡಗಳಿಗೆ ಅನುಗುಣವಾಗಿ ಕೇರಳ ರಾಜ್ಯದಲ್ಲಿ ಸ್ಥಾಪನೆಯಾಗಿರುವಂತೆಯೇ ಇಲ್ಲಿಯೂ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಾಗಲಿದೆ ಎಂದರು.

ನಾವು ಅನಿವಾಸಿ ಭಾರತೀಯರಿಗೆ ಅನುಕೂಲವಾಗುವಂತೆ ಸಚಿವಾಲಯವನ್ನು ಸ್ಥಾಪಿಸುತ್ತೇವೆ. ಅವರಲ್ಲಿ ಬಹಳಷ್ಟು ಮಂದಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಅವರು ತಮ್ಮ ತಾಯ್ನಾಡು ಸಮೃದ್ಧವಾಗಿರಬೇಕೆಂದು ಬಯಸುತ್ತಾರೆ ಎಂದು ತಿಳಿಸಿದರು.

ಅನಿವಾಸಿ ಭಾರತೀಯರಿಗಾಗಿಯೇ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪಕ್ಷದ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಈಗಾಗಲೇ ರಾಜ್ಯದ ಎನ್ ಆರ್‌ ಐ ಕೋಶದ ಉಪಾಧ್ಯಕ್ಷರನ್ನು ನೇಮಿಸಲಾಗಿದೆ ಎಂದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಎನ್‌ ಆರ್‌ ಐಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಕರಡು ಟಿಪ್ಪಣಿಯನ್ನು ಸಹ ಸಲ್ಲಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಹಿಂದಿನ ಲೇಖನ15 ತಿಂಗಳ ಪುಟ್ಟ ಮಗುವಿಗಾಗಿ ಮಿಡಿದ ಸಿಎಂ ಸಿದ್ದರಾಮಯ್ಯ ಹೃದಯ: ನೆರವಿಗಾಗಿ ಪ್ರಧಾನಿ ಮೋದಿಗೆ ಮನವಿ
ಮುಂದಿನ ಲೇಖನಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಳಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭೇಟಿ