ಮನೆ ಸುದ್ದಿ ಜಾಲ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ

ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ

0

ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ (ಕಾಸ್ಮಾಸ್) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು,  ಭಾರತ ವಿಶ್ವಗುರುವಾಗಲು ಇದೊಂದು ಮಹತ್ವದ ಹೆಜ್ಜೆ. ಇಲ್ಲಿ ಮೈಸೂರು ವಿಶ್ವವಿದ್ಯಾಲಯ 3 ಎಕರೆ ಜಾಗ ನೀಡಿದ್ದು, ಈ ಕೇಂದ್ರದಲ್ಲಿ ₹ 81 ಕೋಟಿ ವೆಚ್ಚದಲ್ಲಿ ಪ್ಲಾನಿಟೋರಿಯಂ ಅನ್ನು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ಸ್ಥಾಪಿಸಲಿದೆ. ಯುವ ವಿಜ್ಞಾನಿಗಳು ಹೆಚ್ಚು ಹೆಚ್ಚು ಬರಬೇಕಿದೆ. ಅದರಲ್ಲಿ ಯುವತಿಯರ ಸಂಖ್ಯೆಯೂ ಗಣನೀಯವಾಗಿರಬೇಕಿದೆ. ಈ ನಿಟ್ಟಿನಲ್ಲಿ ಈ ಕೇಂದ್ರವು ಸಹಕಾರಿ ಆಗಲಿದೆ ಎಂದು ತಿಳಿಸಿದರು.
ನಾವು ಈಗ ದತ್ತಾಂಶಗಳನ್ನು ಸಂಗ್ರಹಿಸುತ್ತಿದ್ದೇವೆ. ಆದರೆ ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಬೇಕಿದೆ. ಅವುಗಳ ಬಳಕೆಯ ಲಾಭ ಸಮಾಜದ ಎಲ್ಲ ಕ್ಷೇತ್ರಗಳಿಗೂ ದಕ್ಕಬೇಕಿದೆ ಎಂದರು.

ಸಂಸದ ಪ್ರತಾಪಸಿಂಹ, ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ.ಕೆ.ವಿಜಯರಾಘವನ್, ಅಣುಶಕ್ತಿ ವಿಭಾಗದ ಕಾರ್ಯದರ್ಶಿ ಕೆ.ಎನ್.ವ್ಯಾಸ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಎಸ್.ಚಂದ್ರಶೇಖರ, ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ನಿರ್ದೇಶಕಿ ಪ್ರೊ.ಅನ್ನಪೂರ್ಣಿ ಸುಬ್ರಹ್ಮಣಿಯಂ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇದ್ದರು.

ಹಿಂದಿನ ಲೇಖನರಾಜ್ಯಕ್ಕೆ ಜಿಎಸ್‍ಟಿ ಪಾಲು ಕಡಿಮೆಯೇಕೆ.?:  ನಿರ್ಮಲ ಸೀತಾರಾಮನ್ ಗೆ ವಿದ್ಯಾರ್ಥಿ ಪ್ರಶ್ನೆ
ಮುಂದಿನ ಲೇಖನಉಕ್ರೇನ್ʼನಿಂದ ಹಿಂದಿರುಗಿದ ವೈದ್ಯ ಕನ್ನಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವಂತೆ ಹೆಚ್‍ಡಿಕೆ ಸರಕಾರಕ್ಕೆ ಒತ್ತಾಯ