ಮನೆ ಆರೋಗ್ಯ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

0

ಬೆಂಗಳೂರು: ಪ್ರಸಕ್ತ ವರ್ಷ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಚುನಾವಣಾ ವರ್ಷದ ಹೊಸ್ತಿಲಿನ ಬಿಗ್​ ಬಜೆಟ್​ನಲ್ಲಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇದರ ಜೊತೆಗೆ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜತೆಗೆ ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ದಾಖಲೆಗಳನ್ನು ಡಿಜಿಟಲ್​ ರೂಪದಲ್ಲಿ ದಾಖಲಿಸಿದರೆ, ಮತ್ತೊಮ್ಮೆ ಚಿಕಿತ್ಸೆ ಬರುವಾಗ, ರೋಗಿಗಳಿಗೆ ಹಾಗೂ ವೈದ್ಯರಿಗೆ ಇಬ್ಬರಿಗೂ ಸಹಾಯಕವಾಗಲಿದೆ.

ಜನಸಾಮಾನ್ಯರ ಮಾನಸಿಕ ಆರೋಗ್ಯ ಕಾಪಾಡಲು ಮತ್ತು ಅವುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಿಮ್ಹಾನ್ಸ್​ ಸಹಯೋಗದೊಂದಿಗೆ ಕರ್ನಾಟಕ ಮೆದುಳು ಯೋಜನೆಯನ್ನು ಪ್ರಾರಂಭಿಸಿ, ಆ ಯೋಜನೆಗೆ 25 ಕೋಟಿ ರೂ. ವ್ಯಯಿಸಿ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲಾಗುವುದು.

ಎಲ್ಲಾ ಜಿಲ್ಲೆಗಳಲ್ಲಿ ಹ್ಯಾಂಡ್​ ಹೋಲ್ಡ್​ ಎಕ್ಸ್​ ರೇ ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಹಿಂದಿನ ಲೇಖನನಿಮ್ಮ ಫೋನ್ ನಲ್ಲಿ ಈ ಆ್ಯಪ್ಸ್’ಗಳಿದ್ದರೆ ಇಂದೇ ಡಿಲೀಟ್ ಮಾಡಿ!
ಮುಂದಿನ ಲೇಖನಅಸ್ಸಾಂನ ಮಾರುಕಟ್ಟೆಯೊಂದರಲ್ಲಿ ಅಗ್ನಿ ಅವಘಡ: 150 ಅಂಗಡಿಗಳು ಅಗ್ನಿಗಾಹುತಿ