ಮನೆ ಸುದ್ದಿ ಜಾಲ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳ ತೆರವು:  ಸುಪರ್ದಿಗೆ ಬಿಡಿಎ

ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳ ತೆರವು:  ಸುಪರ್ದಿಗೆ ಬಿಡಿಎ

0

ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಹೆಚ್.ಬಿ.ಆರ್. ಬಡಾವಣೆಯ 1ನೇ ಹಂತ, ಕಾಚರಕನಹಳ್ಳಿ ಗ್ರಾಮದ ಸರ್ವೆ ನಂ. 181, 182 ಮತ್ತು 183ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿರುವ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ಇಂದು ಬೆಳಗ್ಗೆ  ಬಿಡಿಎ ಅಧಿಕಾರಿಗಳು ತೆರವುಗೊಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರ 1985ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಸುಮಾರು ರೂ. 150 ಕೋಟಿ ಬೆಲೆ ಬಾಳುವ 2.20 ಎಕರೆ ಜಾಗವನ್ನು ಭದ್ರತೆಯ ಹಿತದೃಷ್ಟಿಯಿಂದ 200 ಅಧಿಕಾರಿಗಳು ಸೇರಿದಂತೆ 100 ಜನ ಕಾರ್ಮಿಕರು ಹಾಗೂ 15 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸಿ ಪ್ರಾಧಿಕಾರದ ಸುಪರ್ದಿಗೆ ತೆಗೆದುಕೊಳ್ಳಲಾಯಿತು.

ಅನಧಿಕೃತ ಕಟ್ಟಡಗಳ ತೆರವು ಕಾರ್ಯಕ್ಕೂ ಮುನ್ನ ನೂತನವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡ ಎನ್.ಜಯರಾಂ ಅವರು ಪ್ರಾಧಿಕಾರದ ಕಾನೂನು ಕೋಶದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಲಹೆಯನ್ನು ಪಡೆದು, ತೆರವು ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿ, ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗಿದೆ.

ಹಿಂದಿನ ಲೇಖನಚಾಮರಾಜನಗರ: ಅಳಿವಿನಂಚಿನಲ್ಲಿರುವ ಮುಕ್ಕಡಹಳ್ಳಿಯ ಶತಮಾನದ ಶಾಲೆ
ಮುಂದಿನ ಲೇಖನಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕ  ಶೇಖಡಾ 50%  ರಿಯಾಯಿತಿ