ಮನೆ ರಾಜಕೀಯ ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಎಲ್ಲರೂ ತಲೆ ಬಾಗಲೇ ಬೇಕು: ವೀರಪ್ಪ ಮೊಯ್ಲಿ

ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಎಲ್ಲರೂ ತಲೆ ಬಾಗಲೇ ಬೇಕು: ವೀರಪ್ಪ ಮೊಯ್ಲಿ

0

ಮೈಸೂರು: ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​​ಗೆ ಹೇಳುವಂಥದ್ದು ಏನೂ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ತಲೆ ಬಾಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ,.

Join Our Whatsapp Group

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಬಿಕೆ ಹರಿಪ್ರಸಾದ್ ರಾಜೀನಾಮೆ ಹೇಳಿಕೆ ವಿಚಾರವಾಗಿ ವೀರಪ್ಪ ಮೊಯ್ಲಿ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರಿಗೆ ನೀಡಿದ್ದ ಗ್ಯಾರಂಟಿ ಯೋಜನೆ ಖಂಡಿತ ಜಾರಿ ಆಗುತ್ತದೆ. ಈ ವಿಚಾರದಲ್ಲಿ ಯಾಕೆ ಇಷ್ಟು ಆತುರ, ಗ್ಯಾರಂಟಿ ಯೋಜನೆಗಳನ್ನು ಕೊಡುವುದು ಪಕ್ಷ ಅಲ್ಲ, ಸರ್ಕಾರ. ಗ್ಯಾರಂಟಿ ಯೋಜನೆಗಳಿಗೆ ಒಂದಷ್ಟು ಮಾನದಂಡ ಇರುತ್ತವೆ, ಮಾನದಂಡಗಳನ್ನು ನಿಗದಿಪಡಿಸಿ ಗ್ಯಾರಂಟಿ ಜಾರಿ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇದ್ದಾರೆ. ಅಧಿಕಾರ ಹಂಚಿಕೆ ಕುರಿತು ಈಗ ಚರ್ಚೆ‌ ಬೇಡ. ರಾಜ್ಯದಲ್ಲಿ ಸುಭದ್ರ ಸರ್ಕಾರ ಇದೆ, ಉತ್ತಮ ಆಡಳಿತ ಕೊಡುತ್ತೆವೆ ಎಂದರು.

ಹಿಂದಿನ ಲೇಖನಸಿ.ಪುಟ್ಟರಂಗಶೆಟ್ಟಿಗೆ ಕೈತಪ್ಪಿದ ಸಚಿವ ಸ್ಥಾನ: ಅಭಿಮಾನಿಗಳ ಆಕ್ರೋಶ
ಮುಂದಿನ ಲೇಖನಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ? ಇಲ್ಲಿದೆ ಮಾಹಿತಿ