ಮೈಸೂರು ಜಿಲ್ಲಾ ಸಕಾಲ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಅಪರ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಪ್ರಮುಖ ಇಲಾಖೆಗಳ ಸಕಾಲ ನೋಡಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಮಿತಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಗೆ ಸ್ಪಂದಿಸಿ ಅವರಿಗೆ ಸರ್ಕಾರದಿಂದ ದೊರಕಬೇಕಿರುವ ಅಗತ್ಯ ಸೇವೆಗಳನ್ನು ಸಕಾಲದಲ್ಲಿ ಯಾವುದೇ ವಿಳಂಬವಿಲ್ಲದೆ ನೀಡಬೇಕೆಂದು ಸೂಚನೆ ನೀಡಿದರು.
ಅಲ್ಲದೆ ಸರ್ಕಾರದ ಯೋಜನೆಗಳ ಹಾಗೂ ಸಾರ್ವಜನಿಕರ ಸೇವೆಗಳನ್ನು ಸಕಾಲದಲ್ಲಿ ನೀಡಲು ವಿಳಂಬ ಮಾಡುವ ಅಧಿಕಾರಿ/ಸಿಬ್ಬಂದಿಗಳ ಮೇಲೆ ಸಕಾಲ ಕಾಯ್ದೆಯನ್ವಯ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಮೈಸೂರು ಜಿಲ್ಲೆಯನ್ನು ಸಕಾಲ ಯೋಜನೆಯ ಸಮರ್ಪಕ ಅನುಷ್ಟಾನದಲ್ಲಿ ಮಾದರಿ ಜಿಲ್ಲೆಯಾಗಿಸಲು ಶ್ರಮ ವಹಿಸಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಮುಖ ಇಲಾಖೆಗಳ ಸಕಾಲ ನೋಡಲ್ ಅಧಿಕಾರಿಗಳು ಹಾಜರಿದ್ದರು.















