ಮೈಸೂರು: ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 0031/2023 ಸಂಖ್ಯೆಯ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸುತ್ತಿರುವ ಮತ್ತು ದೂರುದಾರನಾದ ನನಗೆ ಪ್ರಾಣ ಬೆದರಿಕೆ ಹಾಕುತ್ತಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ತನಿಖಾಧಿಕಾರಿಗೆ ಸೂಕ್ತ ಸೂಚನೆ ನೀಡಲು ಸವಾಲ್ ವಾಹಿನಿ ಸಂಪಾದಕ ಪ್ರದೀಪ್ ಕುಮಾರ್, ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಮೈಸೂರಿನ ಪಶ್ಚಿಮ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನಡೆದಿರುವ ಅಪರಾಧ ಮತ್ತು ಭ್ರಷ್ಟಾಚಾರ ಕೃತ್ಯಗಳಿಗೆ ಸಂಬಂಧಿಸಿದಂತೆ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರ.ವ.ವ 0031/2023 ಸಂಖ್ಯೆಯಲ್ಲಿ ಪ್ರಕರಣ ದಾಖಲಾಗಿದೆ. ಸದರಿ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 409, 419, 420, 468 ಸಹವಾಚಕ 149 ಅನ್ನು ಅಳವಡಿಸಿಕೊಳ್ಳಲಾಗಿದೆ. ಅಜೀವ ಕಾರವಾಸ ಅಥವಾ 10 ವರ್ಷಗಳ ಶಿಕ್ಷೆಗೆ ಒಳಪಡುವಂತಹ ಗಂಭೀರ ಆರೋಪ ಹೊತ್ತಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕಾದ ತನಿಖಾಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಲ್ಲದೇ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಗಳು ಸದರಿ ಕಛೇರಿಯ ಮುಖ್ಯಸ್ಥರು ಆಗಿರುವುದರಿಂದ ಎಲ್ಲಾ ದಾಖಲೆಗಳು ಮತ್ತು ಪ್ರಕರಣಕ್ಕೆ ಬೇಕಾದ ಸಾಕ್ಷಾಧಾರಗಳು ಆರೋಪಿಗಳ ವಶದಲ್ಲೇ ಇರುತ್ತದೆ. ಆರೋಪಿಗಳು ಪ್ರಭಾವಿಗಳಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ, ಗಂಭೀರ ಆರೋಪವನ್ನು ಹೊತ್ತಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮತ್ತು ಈ ಕೆಳಕಂಡ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಆದಷ್ಟು ಬೇಗ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಮಾಡಿಕೊಳ್ಳುತ್ತೇನೆ. ಪತ್ರ ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.
ಎಲ್ಲಾ ಆರೋಪಿಗಳಿಗೆ ಸೇರಿದ ಸಂಚಾರಿ ದೂರವಾಣಿಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳ ಕರೆಗಳ ಮತ್ತು ಟವರ್ ಲೊಕೇಷನ್ ಹಾಗೂ ವಾಟ್ಸಪ್’ ದಾಖಲೆಗಳಾನ್ನು ಪಡೆದುಕೊಳ್ಳಬೇಕಿದೆ. ಎಲ್ಲಾ ಆರೋಪಿಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗಳ ದಾಖಲೆಗಳನ್ನು ಪಡೆದುಕೊಂಡು, ಪ್ರತಿ ತಿಂಗಳು ಇವರಿಗೆ ಸಂಬಳವಾಗಿ ಯಾರು, ಎಷ್ಟು ಹಣವನ್ನು ಯಾವ ಮೂಲದಿಂದ ಕೊಡುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.
ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಅರೋಪಿಗಳ ಬೆಂಬಲಿಗರು ಮತ್ತು ಕೆಲವು ಆರೋಪಿಗಳು ಸಾರ್ವಜನಿಕವಾಗಿ ಪ್ರಾಣ ಬೆದರಿಕೆ ಹಾಕುವುದರೊಂದಿಗೆ, ನಾನು ನೀಡಿರುವ ದೂರು ಹಿಂಪಡೆಯದಿದ್ದರೆ, ಇಲ್ಲಸಲ್ಲದ ಆರೋಪ ಮಾಡಿ ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿ ಶಿಕ್ಷೆ ಕೊಡಿಸುವುದಾಗಿ ಬೆದರಿಸುತ್ತಿದ್ದಾರೆ. ಆದ್ದರಿಂದ ನನಗೆ ರಕ್ಷಣೆ ನೀಡುವುದರೊಂದಿಗೆ, ಅವರನ್ನು ಕೂಡಲೇ ಬಂಧಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.