ಮನೆ ಸುದ್ದಿ ಜಾಲ ಮಾಜಿ ಶಾಸಕ ಜಿ.ವಿ.ಮಂಟೂರ ನಿಧನ

ಮಾಜಿ ಶಾಸಕ ಜಿ.ವಿ.ಮಂಟೂರ ನಿಧನ

0

ಬಾಗಲಕೋಟೆ:ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಜಿ.ವಿ.ಮಂಟೂರ (92) ಗುರುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಮೂವರು ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ.

ಅಂತ್ಯಕ್ರಿಯೆ ಸ್ವಗ್ರಾಮ ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿಯಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿ.ವಿ.ಮಂಟೂರ 1983ರಲ್ಲಿ ಮೊದಲ ಬಾರಿಗೆ ಪಕ್ಷೇತರರಾಗಿ ಸ್ಪರ್ಧಿಸಿ ಬಾಗಲಕೋಟೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಅಂದಿನ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಸರಳತೆಗೆ ಹೆಸರಾಗಿದ್ದ ಮಂಟೂರ ಇತ್ತೀಚಿನವರೆಗೂ ಸರ್ಕಾರಿ ಬಸ್ ನಲ್ಲಿಯೇ ಓಡಾಟ ನಡೆಸುತ್ತಿದ್ದರು.

ಹಿಂದಿನ ಲೇಖನಒಂದು ತಿಂಗಳು ಪದವಿ ಪರೀಕ್ಷೆ ಮುಂದೂಡಲು ವಿವಿಗಳಿಗೆ ಸೂಚನೆ
ಮುಂದಿನ ಲೇಖನವಿವಾಹ ಸಮಾರಂಭದಲ್ಲಿ ಬಾವಿಗೆ ಬಿದ್ದು 13 ಮಂದಿ ದುರ್ಮರಣ