ಆನೇಕಲ್: ಮಾಜಿ ವಿಧಾನಪರಿಷತ್ ಸದಸ್ಯ ಬಿ.ಟಿ. ದಯಾನಂದರೆಡ್ಡಿ ಸಹೋದರ, ಬಿಲ್ಡರ್ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬಿ.ಟಿ.ನಾಗರಾಜ್ ರೆಡ್ಡಿ ಅವರು ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಮಹೇಂದ್ರ ಹೋಮ್ಸ್ ಮತ್ತು ಗ್ರೂಪ್ ಅಪ್ ಕಂಪನಿಗಳ ಮಾಲೀಕರಾಗಿದ್ದಾರೆ. ಇಡಿ ಅಧಿಕಾರಿಗಳು ಹಲವು ದಾಖಲೆಗಳು ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಬಿ.ಟಿ.ನಾಗರಾಜರೆಡ್ಡಿ ಅವರು ಇತ್ತೀಚೆಗೆ ಮಹೇಂದ್ರ ಹೋಮ್ಸ್ ಹೆಸರಿನಲ್ಲಿ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿದ್ದರು. ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಹೆಚ್ಚು ಹೂಡಿಕೆ ಮಾಡಿದ್ದರು.
Saval TV on YouTube