ಮನೆ ರಾಜಕೀಯ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ

ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ

0

ಮೈಸೂರು: ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ಗುರುವಾರ ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಾಯಿತು.

ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಡೊನಾಲ್ಡ್ ನಿರ್ಮಾಣಿಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿ. ಎಪ್ರಿಲ್ 08,09 ಮತ್ತು10 ರಂದು ನಡೆಯುವ ರಾಜೀವ್ ಗಾಂಧಿ ಕಪ್ ಫುಟ್ಬಾಲ್ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆಗೊಳಿಸಿದರು.

ನೂತನವಾಗಿ ಉಸ್ತುವಾರಿಯಾಗಿ ನೇಮಕವಾಗಿರುವ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ವಿಶ್ವನಾಥ್.ಪಿ,   ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್. ಜೆ, ರಾಜ್ಯ ಕಾರ್ಯದರ್ಶಿ ಆಶೀಸ್ ಫೇರೇರಾ, ರಾಜ್ಯ ಕಾರ್ಯದರ್ಶಿ ದೀಪಕ್ ಶಿವಣ್ಣ ರವರನ್ನು ಸನ್ಮಾನಿಸಲಾಯಿತು.

ಗ್ರಾಮಾಂತರ ಯುವ ಕಾಂಗ್ರೆಸ್ ಸಮಿತಿಯಲ್ಲಿದ್ದ ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿರುವ ಸ್ವರೂಪ್ ಶಿವಯ್ಯ ಹಾಗೂ ಆನಂದ್ ಶಿವಣ್ಣೇಗೌಡ ರವರನ್ನು ಅಭಿನಂದಿಸಲಾಯಿತು.

ನಂತರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಸದಸ್ಯತ್ವ ನೋಂದಣಿ, ಬ್ಲಾಕ್ ಕಾಂಗ್ರೆಸ್ ಸಮಿತಿ ರಚನೆಗೆ ಗಡುವು ನೀಡಲಾಯಿತು ಹಾಗೂ ಸಂಘಟನೆ ಕುರಿತು ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ  ಜಿಲ್ಲಾ ಉಪಾಧ್ಯಕ್ಷರಾದ ಹಿನಕಲ್ ಮಂಜುನಾಥ್ ಮುಂತಾದ ಪದಾಧಿಕಾರಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಕ್ಷಯಕ್ಕೆ ಚಿಕಿತ್ಸೆ ಜೊತೆಗೆ ಆಪ್ತ ಸಮಾಲೋಚನೆಯೂ ಅಗತ್ಯ: ಸಚಿವ ಡಾ.ಕೆ.ಸುಧಾಕರ್
ಮುಂದಿನ ಲೇಖನರಾಶಿ ಭವಿಷ್ಯ ಸರಿಯಿಲ್ಲ ಎಂದು ಮಗುವನ್ನೇ ಕೊಂದ ತಾಯಿ