ಮನೆ ಅಪರಾಧ ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ

ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ

0

ಶ್ರೀನಗರ: ಪಹಲ್ಗಾಮ್ ಶಂಕಿತ ದಾಳಿಕೋರ ಲಷ್ಕರ್-ಎ-ತೈಬಾ (ಎಲ್‌ಇಟಿ) ಉಗ್ರ ಆಸಿಫ್ ಶೇಖ್ ಮನೆ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆ ಮನೆ ಆಸಿಫ್ ಶೇಖ್ ಎಂಬ ಭಯೋತ್ಪಾದಕನದ್ದಾಗಿದ್ದು, ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ ಘಟನೆಯಲ್ಲಿ ಲಷ್ಕರ್ ಉಗ್ರ ಆಸಿಫ್ ಶೇಖ್ ಹೆಸರು ಕೂಡ ಕೇಳಿಬಂದಿತ್ತು. ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಮನೆಗಳು ನೆಲಸಮವಾಗಿದೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಮೂಲಗಳ ಪ್ರಕಾರ, ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಆವರಣದೊಳಗೆ ಕೆಲವು ಅನುಮಾನಾಸ್ಪದ ವಸ್ತುಗಳು ಕಂಡುಬಂದವು.

ಸನ್ನಿಹಿತ ಅಪಾಯವನ್ನು ಗ್ರಹಿಸಿದ ಸಿಬ್ಬಂದಿ, ತಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣವೇ ಸ್ಥಳದಿಂದ ಹಿಂದೆ ಸರಿದರು. ಸ್ವಲ್ಪ ಸಮಯದ ನಂತರ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ಮನೆ ಸಂಪೂರ್ಣವಾಗಿ ಹಾನಿಗೊಳಗಾಯಿತು. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ಮನೆಯ ಒಳಗಡೆ ಇದ್ದ ಅನುಮಾನಾಸ್ಪದ ಸ್ಫೋಟಕ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.