ಮನೆ ರಾಜ್ಯ ದೆಹಲಿಯಲ್ಲಿ ಸ್ಫೋಟ ಪ್ರಕರಣ; ಕಾರವಾರದಲ್ಲಿ ಹೈ ಅಲರ್ಟ್‌

ದೆಹಲಿಯಲ್ಲಿ ಸ್ಫೋಟ ಪ್ರಕರಣ; ಕಾರವಾರದಲ್ಲಿ ಹೈ ಅಲರ್ಟ್‌

0

ಕಾರವಾರ : ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪ್ಯಾಟ್ರೊಲಿಂಗ್‍ಗೆ ಎಸ್‌ಪಿ ದೀಪನ್ ಸೂಚನೆ ನೀಡಿದ್ದಾರೆ. ಕಾರವಾರ ಬಂದರು ಸೇರಿದಂತೆ ಜಿಲ್ಲೆಯ ವಿವಿಧ ಬಂದರು, ರೈಲ್ವೇ ಸ್ಟೇಷನ್, ಬಸ್ ಸ್ಟ್ಯಾಂಡ್ ಮುಂತಾದ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರವಾರದ ಕ್ರಿಮ್ಸ್ ಆಸ್ಪತ್ರೆ ಆವರಣ, ಬಂದರು ಪ್ರದೇಶಗಳಲ್ಲಿ ಎಸ್‌ಪಿಯವರು ಖುದ್ದು ಪರಿಶೀಲನೆ ನಡೆಸಿದ್ದಾರೆ. ರೈಲ್ವೇ ನಿಲ್ದಾಣ, ಬಂದರು, ಬಸ್‍ಸ್ಟ್ಯಾಂಡ್ ಹಾಗೂ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆಗೆ ಬಾಂಬ್ ಹಾಗೂ ಡಾಗ್ ಸ್ಕ್ವಾಡ್ ತಂಡಕ್ಕೆ ಸೂಚನೆ ನೀಡಲಾಗಿದೆ. ಕರ್ನಾಟಕ ಗಡಿ ಭಾಗದ ಗೋವಾ ಭಾಗದ ಮಾಜಾಳಿ, ರಾಮನಗರ ತಾಲೂಕಿನ ಅನಮೋಡ್ ಭಾಗದಲ್ಲಿ ಜಿಲ್ಲೆಗೆ ಬರುವ ವಾಹನಗಳ ಪರಿಶೀಲನೆ ಸೂಚನೆ ನೀಡಲಾಗಿದೆ.

ಕದಂಬ ನೌಕಾನೆಲೆ ಪ್ರದೇಶ ಹಾಗೂ ಕೈಗಾ ಅಣು ವಿದ್ಯುತ್ ಸ್ಥಾವರ ಪ್ರದೇಶದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಗೋವಾ, ಭಟ್ಕಳ, ರಾಮನಗರ ಗಡಿಯಿಂದ ಜಿಲ್ಲೆಗೆ ಬರುವ ಪ್ರತಿ ವಾಹನಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.