ಮನೆ ಉದ್ಯೋಗ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ದಿನಾಂಕ ವಿಸ್ತರಣೆ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ದಿನಾಂಕ ವಿಸ್ತರಣೆ

0

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, 2022-23ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಹೊಸದಾಗಿ ಪ್ರವೇಶಕ್ಕೆಅರ್ಜಿ ಆಹ್ವಾನಿಸಲಾಗಿತ್ತು. ಈಗ ಈ ಅರ್ಜಿ ದಿನಾಂಕವನ್ನು ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಹೊಸದಾಗಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಫೆಬ್ರವರಿ 11,2023ರ ವರೆಗೆ ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳ ಕೊರಿಕೆಯ ಮೇರೆಗೆ ಈಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 27-03-2023 ರವೆರೆಗೆ ವಿಸ್ತರಿಸಲಾಗಿದೆ.

ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 27-3-2023 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಬಳ್ಳಾರಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ ಅವರು ತಿಳಿಸಿದ್ದಾರೆ.

ಹಿಂದಿನ ಲೇಖನಬ್ರಹ್ಮಪುರಂ ಮಾಲಿನ್ಯ: ಕೇರಳ ಸರ್ಕಾರ ಸಂಪೂರ್ಣ ವಿಫಲ ಎಂದ ಎನ್‌’ಜಿಟಿ, ಪಾಲಿಕೆಗೆ ₹100 ಕೋಟಿ ದಂಡ
ಮುಂದಿನ ಲೇಖನಚಾಮರಾಜನಗರ: ಮಚ್ಚಿನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ