ಮನೆ ರಾಷ್ಟ್ರೀಯ ವಿಪರೀತ ಚಳಿ: ಹೃದಯಾಘಾತದಿಂದ ಕಾನ್ಪುರದಲ್ಲಿ 98 ಜನರ ಸಾವು

ವಿಪರೀತ ಚಳಿ: ಹೃದಯಾಘಾತದಿಂದ ಕಾನ್ಪುರದಲ್ಲಿ 98 ಜನರ ಸಾವು

0

ಕಾನ್ಪುರ: ವಿಪರೀತ ಚಳಿಯಿಂದಾಗಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಒಂದೇ ವಾರದಲ್ಲಿ 98 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಒಂದು ವಾರದಲ್ಲಿ 723 ಹೃದ್ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ 98 ಜನರು ಮೃತಪಟ್ಟಿದ್ದಾರೆ. ಇದರಲ್ಲಿ 44 ಜನರು ಆಸ್ಪತ್ರೆಯಲ್ಲಿ ಮೃತಪಟ್ಟರೆ, 54 ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಮೃತಪಟ್ಟಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್‌’ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ತಿಳಿಸಿದೆ

ಪ್ರಸುತ್ತ ಉತ್ತರ ಭಾರತದ ಅನೇಕ ಕಡೆ ವಿಪರೀತ ಚಳಿಗಾಳಿ ಬೀಸುತ್ತಿದೆ. ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲಾ ವಯೋಮಾನದ ಜನರು ಮುನೆಚ್ಚರಿಕೆವಹಿಸಿಬೇಕೆಂದು ಹೃದ್ರೋಗ ವಿಭಾಗದ ನಿರ್ದೇಶಕ ವಿನಯ್ ಕೃಷ್ಣ ತಿಳಿಸಿದ್ದಾರೆ.

ಹಿಂದಿನ ಲೇಖನಇಂಡಿಗೋ ವಿಮಾನದಲ್ಲಿ ಮದ್ಯ ಸೇವಿಸಿ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ತೋರಿದ ಇಬ್ಬರ ಬಂಧನ
ಮುಂದಿನ ಲೇಖನಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕ ಪ್ರಶ್ನಿಸಿ ಅರ್ಜಿ : ಸರ್ಕಾರಕ್ಕೆ ನೋಟಿಸ್