ಮನೆ ರಾಜ್ಯ ಎಲ್ಲಾ ರಂಗಗಳಲ್ಲಿ ವಿಫಲವೇ ರಾಜ್ಯ ಸರ್ಕಾರದ ಸಾಧನೆ : ಬಸವರಾಜ ಬೊಮ್ಮಾಯಿ

ಎಲ್ಲಾ ರಂಗಗಳಲ್ಲಿ ವಿಫಲವೇ ರಾಜ್ಯ ಸರ್ಕಾರದ ಸಾಧನೆ : ಬಸವರಾಜ ಬೊಮ್ಮಾಯಿ

0

ಕಲಬುರಗಿ: ರಾಜ್ಯ ಸರ್ಕಾರದ ವರ್ಷದ ಸಾಧನೆ ಶೂನ್ಯವಾಗಿದ್ದು, ಎಲ್ಲ ರಂಗಗಳಲ್ಲಿ ವಿಫಲವೇ ಅವರ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

Join Our Whatsapp Group

ವಿಧಾನ ಪರಿಷತ್ ಚುನಾವಣಾ ಪ್ರಚಾರದಂಗವಾಗಿ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಒಂದೇ ಒಂದು ಹೊಸ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸದಿರುವುದು, ಶಾಸಕರಿಗೆ ಅನುದಾನ ಮರೀಚಿಕೆಯಾಗಿರುವುದು, ರಾಜ್ಯದಿಂದ ಮೊದಲು ಬರ ಪರಿಹಾರ ನೀಡದೇ ಕೇಂದ್ರ ದತ್ತ ಬೊಟ್ಟು ಮಾಡಿರುವುದು, ಹೆಚ್ಚಿದ ಕೊಲೆಗಳು, ಎಲ್ಲೇ ಮೀರಿದ ಡ್ರಗ್ಸ್ ಮಾಫಿಯಾ, ಬಾಲ ಬಿಚ್ಚಿದ ರೌಡಿಗಳು, ಇದಕ್ಕೆ ರಾಜಕೀಯ ಕುಮ್ಮಕ್ಕು, ರೇವ್ ಪಾರ್ಟಿ ಮೇಲೆ ದಾಳಿ, ಕುಸಿದ ಶೈಕ್ಷಣಿಕ ರಂಗ, ನಾಯಕತ್ವಕ್ಕಾಗಿ ಮುಸುಕಿನ ಗುದ್ದಾಟ ಸರ್ಕಾರ ವಿಫಲತೆಗೆ ಸಾಕ್ಷಿಗಳಾಗಿವೆ ಎಂದು ವಾಗ್ದಾಳಿ ನಡೆಸಿದರು.

ಆರ್ಥಿಕ ಸ್ಥಿತಿಯಂತು ಹೇಳದಂತಿದೆ. ಬಜೆಟ್ ಘೋಷಣೆ ಕಾಮಗಾರಿಗಳ ಪರಿಶೀಲನೆ ಸಹ ಮಾಡಲಿಕ್ಕಾಗಿಲ್ಲ.‌ಒಟ್ಟಾರೆ ರಾಜ್ಯ ಸರ್ಕಾರ ಅಭಿವೃದ್ಧಿ ಯಲ್ಲಿ ಹತ್ತು ವರ್ಷ ಹಿಂದಕ್ಕೆ ಹೋಗಿದೆ. ತಾವು ಪ್ರಾರಂಭಿಸಿದ ವಿವೇಕ ಕಾರ್ಯಕ್ರಮದಡಿಯ 9000 ಶಾಲಾ ಕೊಠಡಿಗಳ ನಿರ್ಮಾಣ ಅನುದಾನ ಕೊರತೆಯಿಂದ ಅರ್ಧಕ್ಕೆ ನಿಂತಿವೆ ಎಂದು ಬೊಮ್ಮಾಯಿ ಟೀಕಿಸಿದರು.

ಶೀಘ್ರ ಸರ್ಕಾರ ಒತನ: ಮುಖ್ಯಮಂತ್ರಿಗಳೇ ರಾಜ್ಯದಿಂದ ಪಿಎಂ ಅಭ್ಯರ್ಥಿ ಯಾರೂ ಇಲ್ಲ‌ಎಂದಿರುವುದಕ್ಕೆ ನಾಯಕತ್ವದ ಮುಸುಕಿನ ಗುದ್ದಾಟ ಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಶೀಘ್ರದಲ್ಲೇ ತನ್ನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಭವಿಷ್ಯ ನುಡಿದರು. ‌

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 23+ 2 ಸೀಟು ಗೆಲ್ಲುತ್ತೇ‌. ಕಾಂಗ್ರೆಸ್ ಇನ್ನೇರಡು ಸೀಟುಗಳ ಹೆಚ್ಚಳಕ್ಕೆ ತೃಪ್ತಿ ಪಡಬೇಕಾಗುತ್ತದೆ. ಜನ ಮೋದಿ ಅವರ ಕೈ ಬಲಪಡಿಸುವುನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದರು. ಸಂಸದ ಡಾ.‌ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ್, ಬಿ.ಜಿ.ಪಾಟೀಲ್, ಶಶೀಲ್ ಜಿ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಚಂದು ಪಾಟೀಲ್ ಹಾಜರಿದ್ದರು.