ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆ ದುರಂತದಲ್ಲಿ ಮೃತರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ತಿಳಿಸಿದ್ದಾರೆ.
185 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಪರಿಸ್ಥಿತಿ ಮೇಲೆ ನಿಗಾ ವಹಿಸುತ್ತಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಆರೋಗ್ಯ ಸಚಿವರು ಶುಕ್ರವಾರ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾದರು.
ಪ್ರಕರಣ ಸಂಬಂಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೂಚನೆ ನೀಡಿದ್ದು, ಮೃತರ ಸಂಬಂಧಿಕರಿಗೆ ತಲಾ ₹10 ಲಕ್ಷ ಘೋಷಿಸಿದ್ದಾರೆ. ಅವಘಡ ಸಂಬಂಧ ತಮಿಳುನಾಡು ವಿಧಾನಸಭೆಯಲ್ಲೂ ವಿವರಣೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜೂನ್ 19ರಂದು ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆ ದುರಂತ ಸಂಭವಿಸಿತ್ತು.
Saval TV on YouTube