ಬೆಂಗಳೂರು: ಒಟ್ಟು 100 ರೂಪಾಯಿಯ ಮುಖಬೆಲೆಯ 30 ನಕಲಿ ನೋಟುಗಳ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ ನಾಲ್ಕು ದೂರುಗಳು ದಾಖಲಾಗಿವೆ.
ಉಡುಪಿ ಮಣಿಪಾಲ, ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚಿನ ಬ್ಯಾಂಕುಗಳಲ್ಲಿ ನಕಲಿ ನೋಟು ಪತ್ತೆಯಾಗಿದೆ.
ಆರ್.ಬಿ.ಐ ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡ, ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಗಳನ್ನು ಆರೋಪಿಗಳನ್ನಾಗಿ ಮಾಡಿ ದೂರು ದಾಖಲಿಸಿದ್ದಾರೆ.














