ಮನೆ ಕಾನೂನು ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ: ಸರಕಾರದ ವರದಿ ಕೇಳಿದ ಹೈಕೋರ್ಟ್‌

ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ: ಸರಕಾರದ ವರದಿ ಕೇಳಿದ ಹೈಕೋರ್ಟ್‌

0

ಬೆಂಗಳೂರು: ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣ ಪಡೆದುಕೊಂಡ ಎಷ್ಟು ಪ್ರಕರಣಗಳಲ್ಲಿ ಇಲ್ಲಿಯವರೆಗೆ ನೋಟಿಸ್‌ ಜಾರಿಗೊಳಿಸಲಾಗಿದೆ ಮತ್ತು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Join Our Whatsapp Group

ಈ ವಿಚಾರವಾಗಿ ಯಾದಗಿರಿ ಜಿಲ್ಲೆಯ ಎಸ್‌ಸಿ-ಎಸ್‌ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿ ಇದೆ ಎಂದು ನೆಪ ಹೇಳಿ ಅರ್ಹರಿಗೂ ತಳವಾರ ಜಾತಿ ಪ್ರಮಾಣಪತ್ರ ನೀಡಲಾಗುತ್ತಿಲ್ಲ ಎಂದು ರಾಜ್ಯ ತಳವಾರ ಮಹಾಸಭಾ ಮಧ್ಯಾಂತರ ಅರ್ಜಿ ಸಲ್ಲಿಸಿತ್ತು.

ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ, ತಮ್ಮನ್ನು ಪ್ರತಿವಾದಿಯನ್ನಾಗಿ ಸೇರಿಸಬೇಕು ಎಂದು ಅರ್ಜಿದಾರರ ಪರ ವಕೀಲ ಎಚ್‌. ಸುನೀಲ್‌ ಕುಮಾರ್‌ ಮನವಿ ಮಾಡಿದರು. ಮಧ್ಯಾಂತರ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಪೀಠ, ಅರ್ಹರಿಗೆ ಜಾತಿ ಪ್ರಮಾಣಪತ್ರ ನೀಡಲು ನ್ಯಾಯಾಲಯದಲ್ಲಿರುವ ಪ್ರಕರಣ ಅಡ್ಡಿಯಾಗುವುದಿಲ್ಲ ಎಂದು ಹೇಳಿ ವಿಚಾರಣೆಯನ್ನು ಸೆ. 18ಕ್ಕೆ ಮುಂದೂಡಿತು.