ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ. ನವೀನ್ ಹಾಗೂ ವತ್ಸಲ ಕಳೆದ 8 ವರ್ಷಗಳ ಹಿಂದೆ ಮದುವೆಯಾಗಿದ್ದರು.
ಈ ದಂಪತಿಗೆ 7 ವರ್ಷದ ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಪತಿ, ಪತ್ನಿ ಜಗಳವಾಡುತ್ತಿದ್ದರು. ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಇಂದು ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನ ಕತ್ತುಹಿಸುಕಿ ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














