ನವದೆಹಲಿ(Newdelhi): ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್(58) ಇಂದು ನಿಧನರಾಗಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ದೆಹಲಿ ಏಮ್ಸ್ ಅಧಿಕೃತ ಮಾಹಿತಿ ನೀಡಿದೆ.
ಸ್ಟ್ಯಾಂಡ್-ಅಪ್ ಕಮೇಡಿಯನ್(stand-up comedian) ಆಗಿರುವ ರಾಜು ಶ್ರೀವಾಸ್ತವ್ ಜಿಮ್ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಆಗಸ್ಟ್ 10ರಂದು ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ದೆಹಲಿ ಏಮ್ಸ್‌ಗೆ ಕರೆತರಲಾಗಿತ್ತು. ಮೂಲತಃ ಕಾನ್ಪುರ ಮೂಲದವರಾಗಿರುವ ಇವರು, ಉತ್ತರ ಪ್ರದೇಶ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
Saval TV on YouTube