ಮನೆ ರಾಷ್ಟ್ರೀಯ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ನಿಧನ

ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ನಿಧನ

0

ನವದೆಹಲಿ(Newdelhi): ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್​(58) ಇಂದು ನಿಧನರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಏಮ್ಸ್​​​ ಅಧಿಕೃತ ಮಾಹಿತಿ ನೀಡಿದೆ.

ಸ್ಟ್ಯಾಂಡ್-ಅಪ್​ ಕಮೇಡಿಯನ್​(stand-up comedian) ಆಗಿರುವ ರಾಜು ಶ್ರೀವಾಸ್ತವ್​​ ಜಿಮ್​​ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಆಗಸ್ಟ್​ 10ರಂದು ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ದೆಹಲಿ ಏಮ್ಸ್‌ಗೆ​ ಕರೆತರಲಾಗಿತ್ತು. ಮೂಲತಃ ಕಾನ್ಪುರ ಮೂಲದವರಾಗಿರುವ ಇವರು, ಉತ್ತರ ಪ್ರದೇಶ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಹಿಂದಿನ ಲೇಖನಬದುಕೆಂಬ ಬಯಲಿಗೆ – ಕವನ
ಮುಂದಿನ ಲೇಖನದೇವರ ಮೂರ್ತಿ ಮುಟ್ಟಿದ ದಲಿತ ಬಾಲಕನಿಗೆ 60 ಸಾವಿರ ದಂಡ