ಹೈದರಾಬಾದ್: ಥಿಯೇಟರ್ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪುಷ್ಪಾ -2 ಸಿನಿಮಾ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಗೆ ಪೊಲೀಸರು ಶಾಕ್ ನೀಡಿದ್ದಾರೆ. ನಟ ಅಲ್ಲು ಅರ್ಜುನ್ ರನ್ನು ಚಿಕ್ಕಡಪಲ್ಲಿ ಠಾಣಾ ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಪುಷ್ಪಾ-2 ಸಿನಿಮಾ ರಿಲೀಸ್ ಹಿನ್ನೆಲೆಯಲ್ಲಿ ಡಿ 4ರಂದು ಹೈದರಾಬಾದ್ ನಲ್ಲಿ ಸಂಧ್ಯಾ ಥೀಯೇಟರ್ ಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಅಲ್ಲು ಅರ್ಜುನ್ ರನ್ನು ನೋಡಲ ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಈ ಸಂಬಂಧ ಪತಿ ದೂರು ಆಧರಿಸಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದು. ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಮಧ್ಯೆ ಇಂದು ಪೊಲೀಸರು ಅಲ್ಲು ಅರ್ಜುನ್ ಅವರನ್ನ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.