ಮೈಸೂರು: ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಭಾರತಿಪುರ ಗ್ರಾಮದ ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ರೈತ ಮೃತಪಟ್ಟ ಘಟನೆ ನಡೆದಿದೆ.
ಹೊಲದಲ್ಲಿ ಅರಿಶಿನ ಬೆಳೆಗೆ ಔಷಧಿ ಸಿಂಪಡಿಸುತ್ತಿದ್ದಾಗ ಹೊಲದಲ್ಲಿ ಹಾದು ಹೋಗಿದ್ದ ವಿದ್ಯುತ್ ಕಂಬದ ತಂತಿ ತಗುಲಿ ರೈತ ನಾಗರಾಜು(37) ಸಾವನ್ನಪ್ಪಿದ್ದಾರೆ.
ವಿದ್ಯುತ್ ತಂತಿ ಕೆಳಗೆ ಹಾದು ಹೋಗಿದ್ದರ ಬಗ್ಗೆ ಈ ಹಿಂದೆಯೇ ರೈತರು ದೂರು ನೀಡಿದ್ದರು. ವಿದ್ಯುತ್ ತಂತಿ ತೆರವು ಬಗ್ಗೆ ಹಲವು ಬಾರಿ ದೂರು ನೀಡಿದ್ದರು. ಆದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯವೇ ರೈತನ ಸಾವಿಗೆ ಕಾರಣ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube