ಮಂಡ್ಯ(Mandya): ಪಾಂಡವರಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ಟ್ರೈಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಕೃಷ್ಣರಾಜಸಾಗರ ಜಲಾಶಯದ ಎದುರು ಕರ್ನಾಟಕ ರಾಜ್ಯ ರೈತಸಂಘ ಸೇರಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ರೈತರು ಆಗ್ರಹಿಸಿದ್ದಾರೆ.
ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್ ಎಸ್ ಗೆ ಹಾನಿ ಆರೋಪ ಹಿನ್ನೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಟ್ರಯಲ್ ಬ್ಲಾಸ್ಟ್ ನಡೆಸಲಾಗುತ್ತಿದ್ದು ಇದಕ್ಕೆ ವಿರೋಧಿಸಿ ರೈತರು ಕೆಆರ್ ಎಸ್ ಎದುರು ಧರಣಿ ನಡೆಸುತ್ತಿದ್ದಾರೆ. ಕೆಆರ್ ಎಸ್ ಸುತ್ತಾಮುತ್ತ ಡಿವೈಎಸ್ಪಿ ಸಂದೇಶ್ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ.














