ಮನೆ ಕಾನೂನು ರೈತರ ಪ್ರತಿಭಟನೆ: ಹೆದ್ದಾರಿ ತಡೆಯದಂತೆ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್‌ ಗೆ ಸುಪ್ರೀಂ ಕೋರ್ಟ್...

ರೈತರ ಪ್ರತಿಭಟನೆ: ಹೆದ್ದಾರಿ ತಡೆಯದಂತೆ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್‌ ಗೆ ಸುಪ್ರೀಂ ಕೋರ್ಟ್ ಸೂಚನೆ

0

ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ನಡೆಸುತ್ತಿರುವ ಪ್ರತಿಭಟನೆಯ ವೇಳೆ ಹೆದ್ದಾರಿಗಳನ್ನು ತಡೆಯದಂತೆ ಅಥವಾ ಸಾರ್ವಜನಿಕರಿಗೆ ಅನಾನುಕೂಲತೆ ಉಂಟುಮಾಡದಂತೆ ಪ್ರತಿಭಟನಾನಿರತ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

Join Our Whatsapp Group

ಅವರ ಅಕ್ರಮ ಬಂಧನಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಲೇವಾರಿ ಮಾಡುವಾಗ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಹಕ್ಕಾಗಿದ್ದರೂ, ಅಂತಹ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಾಗ ಜವಾಬ್ದಾರಿಯ ಅರಿವು ಇರಬೇಕು ಎಂದು ಅದು ಹೇಳಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಪಡೆಯುವ ರೈತರ ಕಾನೂನುಬದ್ಧ ಹಕ್ಕನ್ನು ಈಡೇರಿಸುವವರೆಗೆ ಪ್ರತಿಭಟನೆ ಮತ್ತು ಆಮರಣಾಂತ ಉಪವಾಸ ನಡೆಸಲು ಮುಂದಾಗಿದ್ದ ದಲ್ಲೆವಾಲ್ ಅವರನ್ನು ದೆಹಲಿಯ ಖಾನೌರಿ ಗಡಿಯಲ್ಲಿ ಪ್ರತಿಭಟನಾ ಸ್ಥಳದಿಂದ ಹೊರಗೆ ಕಳಿಸಲಾಗಿತ್ತು ಎಂದು ತಿಳಿದು ಬಂದಿದೆ.

ತಮ್ಮನ್ನು ಬಲವಂತವಾಗಿ ಲೂಧಿಯಾನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೊಂದು ರೀತಿಯ ಬಂಧನ ಎಂದು ದಲ್ಲೆವಾಲ್‌ ಅವರು ನ್ಯಾಯಾಲಯಕ್ಕೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು.

ಆದರೆ ಬಂಧನದಿಂದ ಬಿಡುಗಡೆಗೊಂಡು ಪ್ರತಿಭಟನೆಯಲ್ಲಿ ಅವರು ಮತ್ತೆ ತೊಡಗಿರುವುದನ್ನು ಗಮನಿಸಿದ ನ್ಯಾಯಾಲಯ ಅರ್ಜಿ ವಿಲೇವಾರಿ ಮಾಡಿತು.