ಮನೆ ಅಪರಾಧ ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು

ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು

0

ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಹೊರ ವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ.

Join Our Whatsapp Group

ಬೈಕ್ ನಲ್ಲಿದ್ದ ದಂಪತಿಗಳು ಮೃತಪಟ್ಟಿದ್ದಾರೆ. ಮೃತರನ್ನು ಮೈಸೂರಿನ ಕೂರ್ಗಳ್ಳಿ ಗ್ರಾಮದ ನಿವಾಸಿಗಳಾದ ಚಂದ್ರು ಮತ್ತು ಪ್ರೇಮ ಎಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ರಸ್ತೆ ರಕ್ತಸಿಕ್ತವಾಗಿದೆ. ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.