ಮನೆ ಅಪರಾಧ ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

0

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನ ನಿಡಘಟ್ಟ ಬಳಿ ಈ ದುರ್ಘಟನೆ ಸಂಭವಿಸಿದ್ದು, ರಸ್ತೆ ಸುರಕ್ಷತೆ ಕುರಿತು ಮತ್ತೊಂದು ದೊಡ್ಡ ಪ್ರಶ್ನೆ ಎತ್ತಿದೆ.

ಭಾನುವಾರದ ತಡರಾತ್ರಿ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅವರ ಕಾರು ಬಹುಶಃ ಅತಿವೇಗದಲ್ಲಿ ಆಗಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಘಟನೆ ನಡೆದಿದೆ.

ಅಪಘಾತದಲ್ಲಿ ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು ಹಾಗೂ ಪಾರ್ವತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರನ್ನು ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ, ಇತರರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.