ನವ ದೆಹಲಿ: ಕಾರು ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಮಂಗಳವಾರ ಬೆಳಿಗ್ಗೆ ವರದಿಯಾಗಿದೆ.
ಕ್ರಾಸಿಂಗ್ ರಿಪಬ್ಲಿಕ್ ಪೊಲೀಸ್ ಸ್ಟೇಷನ್ ಪ್ರದೇಶದ ಬಳಿ NH 9 ನಲ್ಲಿ ಲಾಲ್ಕುವಾನ್ ನಿಂದ ದೆಹಲಿಗೆ ಹೋಗುವ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಎಂಟು ವರ್ಷದ ಮಗುವೊಂದು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದು ದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ದೇಹಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Saval TV on YouTube