ಮನೆ ಅಪರಾಧ ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ : ಕಾರು ತೆರವು ಕಾರ್ಯದ ವೇಳೆ ಟ್ರಕ್ ಹರಿದು ಆರು...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ : ಕಾರು ತೆರವು ಕಾರ್ಯದ ವೇಳೆ ಟ್ರಕ್ ಹರಿದು ಆರು ಮಂದಿ ಸಾವು

0

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ-52ರ ಮೇಲೆ ಸಂಭವಿಸಿದೆ.

ಸೋಮವಾರ ರಾತ್ರಿ 8:30ರ ಸುಮಾರಿಗೆ ದೀಪಕ್ ಅಟ್ಕರೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು, ಬೀಡ್ ಗ್ರಾಮದಿಂದ 100 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-52ರ ಡಿವೈಡರ್ ಬಳಿ ಅಪಘಾತಕ್ಕೀಡಾಯಿತು. ಅವಘಡವನ್ನು ನೋಡಿದ ಕೆಲವರು ಕಾರನ್ನು ರಸ್ತೆಯಿಂದ ತೆಗೆಯುತ್ತಿದ್ದರು. 11:30ರ ಸುಮಾರಿಗೆ ವೇಗವಾಗಿ ಬಂದ ಟ್ರಕ್, ತೆರವುಗೊಳಿಸುತ್ತಿದ್ದವರ ಮೇಲೆ ಹಾದು ಹೋಗಿದೆ. ಪರಿಣಾಮ ಆರು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಮೃತರ ವಿವರಗಳು:ಬಾಲು ಅಟ್ಕರೆ, ಭಾಗವತ್ ಪರಲ್ಕರ್, ಸಚಿನ್ ನನ್ನಾವ್ರೆ, ಮನೋಜ್ ಕರಂಡೆ, ಕೃಷ್ಣ ಜಾಧವ್, ದೀಪಕ್ ಸುರಯ್ಯ ಎಲ್ಲರೂ ಬೀಡ್ ಜಿಲ್ಲೆಯ ಜಿಯೋರೈ ಗ್ರಾಮದವರು ಎಂದು ವರದಿಯಾಗಿದ್ದಾರೆ.

ಘಟನೆಯ ಬಳಿಕ ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದು, ಟ್ರಕ್ ಚಾಲಕನ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.