ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿನ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಭೀತಿಯಿಂದಾಗಿ ತಲೆಮರೆಸಿಕೊಂಡಿದ್ದಾರೆ.
ಲೋಕಾಯುಕ್ತ ಪೊಲೀಸರು ಅವರ ಪತ್ತೆಗಾಗಿ ಶೋಧ ಆರಂಭಿಸಿದ್ದಾರೆ.
ವಿರೂಪಾಕ್ಷಪ್ಪ ಅವರ ಮಗ, ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯೂ ಆಗಿರುವ ಪ್ರಶಾಂತ್ ಮಾಡಾಳ್ ಅವರನ್ನು ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಆಗ ಚನ್ನಗಿರಿಯಲ್ಲಿದ್ದ ಅವರು ಹಿರಿಯ ಮಗ ಮಲ್ಲಿಕಾರ್ಜುನ ಅವರೊಂದಿಗೆ ಬೆಂಗಳೂರಿಗೆ ದೌಡಾಯಿಸಿದ್ದರು.
ಅಷ್ಟರಲ್ಲಿ ಸಂಜಯನಗರದಲ್ಲಿರುವ ಶಾಸಕರ ಮನೆ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
Saval TV on YouTube