ಮೈಸೂರು : ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನ ವರುಣಾ ಪಂಚಾಯತಿಯಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿನ ವರುಣಾ ಪಟ್ಟಣ ಪಂಚಾಯತಿ ಕಾರ್ಯದರ್ಶಿ ದಿವ್ಯಾಗೆ ಆತ್ಮಹತ್ಯೆಗೆ ಯತ್ನಿಸಿದವರು.
ಪಂಚಾಯ್ತಿಯಲ್ಲೇ ನಿದ್ರೆ ಮಾತ್ರೆ ಸೇವನೆ ಮಾಡಿದ್ದು, ಬಳಿಕ ದಿವ್ಯಾರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವರ್ಗಾವಣೆ ವಿಚಾರವಾಗಿ ಮಾನಸಿಕ ಕಿರುಕುಳ ಇತ್ತು ಎಂಬ ಆರೋಪವಿದೆ.
ಜ್ಞಾನ ತಪ್ಪಿ ಬಿದ್ದಿದ್ದ ದಿವ್ಯಾರನ್ನ ಸಹ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














