ಬೀದರ್: ಬೀದರ್ ಜಿಲ್ಲೆಯಲ್ಲಿ ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ, ಬಡಿದಾಟ ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ಕುಸಿದು ಬಿದ್ದಿದ್ದಾರೆ. ತತಕ್ಷಣವೇ ಮನ್ನಾಖೇಳಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗೇ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ.
ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮೃತ ಮಲ್ಲಿಕಾರ್ಜುನ ಕುಟುಂಬಸ್ಥರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
Saval TV on YouTube