ಮನೆ ರಾಜ್ಯ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

0

ಬೆಂಗಳೂರು: ಡಿ.ಕೆ ಶಿವಕುಮಾರ್ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ ಅಂತೆಲ್ಲ ಕೆಲ ಗಂಭೀರ ಆರೋಪಗಳನ್ನು ಮಾಡಿ ಏಕವಚನದಲ್ಲಿ ಗುಡುಗಿದ್ದ ರಮೇಶ್ ಜಾರಕಿಹೊಳಿ ದೂರು ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆ(ಅಕ್ಟೋಬರ್ 30) ಪತ್ರಿಕಾಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆಕ್ಷೇಪರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೇ ಆಧಾರ ರಹಿತ ಕೆಲ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಿಂದಿನ ಲೇಖನಇಂದು ಬಿಗ್ ಬಾಸ್  ಮನೆಗೆ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ರೀ ಎಂಟ್ರಿ
ಮುಂದಿನ ಲೇಖನಸಿಎಂ ಸಿದ್ಧರಾಮಯ್ಯ ಮಂಡ್ಯ ಪ್ರವಾಸ: ವ್ಯಂಗ್ಯವಾಗಿ ಸ್ವಾಗತ ಕೋರಿದ ಜಿಲ್ಲಾ ಬಿಜೆಪಿ