ಮನೆ ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13,415 ಹುದ್ದೆಗಳ ಭರ್ತಿ: ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13,415 ಹುದ್ದೆಗಳ ಭರ್ತಿ: ಸಚಿವ ರಾಮಲಿಂಗಾರೆಡ್ಡಿ

0

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Join Our Whatsapp Group

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ 13,415 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು’ ಅಂತಾ ಹೇಳಿದ್ದಾರೆ.

ನಿವೃತ್ತಿ, ಮರಣ ಸೇರಿ ವಿವಿಧ ಕಾರಣಗಳಿಂದ ಕಳೆದ ಹಲವಾರು ವರ್ಷಗಳಿಂದ ಚಾಲಕರು, ನಿರ್ವಾಹಕರು, ತಾಂತ್ರಿಕ ವಿಭಾಗ ಸೇರಿ ಇತರೆ ವಿಭಾಗಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದ ಉತ್ತಮ ಸೇವೆ ನೀಡಲು ಸಮಸ್ಯೆಯಾಗುತ್ತಿದೆ. ಇದನ್ನು ನಿವಾರಿಸಲು 4 ನಿಗಮಗಳಲ್ಲಿ ಖಾಲಿ ಇರುವ 13,415 ಹುದ್ದೆಗಳ ಭರ್ತಿಗೆ ನಿರ್ಧರಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಕೆ.ಎಸ್.ಆರ್.ಟಿ.ಸಿಯಲ್ಲಿ 3,745 ಚಾಲನಾ ಸಿಬ್ಬಂದಿ, 726 ತಾಂತ್ರಿಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ. ಹೊಸದಾಗಿ 1,433 ಚಾಲನಾ ಸಿಬ್ಬಂದಿ, 2,738 ತಾಂತ್ರಿಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು. ಕೆ.ಎಸ್.ಆರ್.ಟಿ.ಸಿಯಲ್ಲಿ 1,773 ನಿರ್ವಾಹಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಬಿಎಂಟಿಸಿಯಲ್ಲಿ 2000 ನಿರ್ವಾಹಕರು, 1 ಸಾವಿರ ಚಾಲಕ ಕಂ ನಿರ್ವಾಹಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

ಹಿಂದಿನ ಲೇಖನಮುಂದಿನ ದಿನಗಳಲ್ಲಿ  ಜನಪ್ರಳಯ ಸಂಭವಿಸುವ ಸಾಧ್ಯತೆ: ಕೋಡಿಮಠದ ಶ್ರೀ ಭವಿಷ್ಯ
ಮುಂದಿನ ಲೇಖನಅನಾನಸ್ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನ