ಮನೆ ಅಪರಾಧ ಗುಂಡು ಹಾರಿಸಿ ಸಿನಿಮಾ ನಿರ್ದೇಶಕನಿಗೆ ಬೆದರಿಕೆ: ನಟ ತಾಂಡವ್ ರಾಮ್ ಬಂಧನ

ಗುಂಡು ಹಾರಿಸಿ ಸಿನಿಮಾ ನಿರ್ದೇಶಕನಿಗೆ ಬೆದರಿಕೆ: ನಟ ತಾಂಡವ್ ರಾಮ್ ಬಂಧನ

0

 ‘ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ.

Join Our Whatsapp Group

ಬೆಂಗಳೂರಿನ ಚಂದ್ರಾ ಲೇಔಟ್ ​ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಪೊಲೀಸರು ಬಂದಿಸಿದ್ದಾರೆ. ತಾಂಡವ್ ರಾಮ್ ಕೆಲ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ನಿರ್ದೇಶನ ಮಾಡುತ್ತಿದ್ದ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ ಕಾರಣ ಸಿಟ್ಟಾಗಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ನಿರ್ದೇಶಕ ಭರತ್, ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್ ​ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ. ಭರತ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಬಂಧಿಸಲಾಗಿದೆ. ಪರವಾನಗಿ ಹೊಂದಿದ್ದ ಅವರ ಬಂದೂಕನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಂಡವ್ ರಾಮ್ ನಾಯಕನಾಗಿ ನಟಿಸುತ್ತಿದ್ದ ‘ದೇವನಾಂಪ್ರಿಯ’ ಹೆಸರಿನ ಸಿನಿಮಾ ಸೆಟ್ಟೇರಿತ್ತು, ಸಿನಿಮಾ ಅನ್ನು ನಿರ್ದೇಶಕ ಭರತ್ ನಾವುಂಡ ನಿರ್ದೇಶನ ಮಾಡುತ್ತಿದ್ದರು. ಆದರೆ ಸಿನಿಮಾವನ್ನು ಭರತ್ ನಿಲ್ಲಿಸಿಬಿಟ್ಟಿದ್ದರಂತೆ. ಇದರಿಂದ ಸಿಟ್ಟಾಗಿದ್ದ ತಾಂಡವ್, ನಿರ್ದೇಶಕ ಭರತ್​ಗೆ ಬೆದರಿಕೆ ಹಾಕಿದ್ದಾರೆ. ಗುಂಡು ಹಾರಿಸಿ ಹತ್ಯೆಗೂ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.