ಮನೆ ಅಂತಾರಾಷ್ಟ್ರೀಯ ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ..!

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ..!

0

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ ಅವರಿಗೆ ನೀಡಿದ್ದಾರೆ. ನೆನ್ನೆ (ಗುರುವಾರ) ಶ್ವೇತಭವನದಲ್ಲಿ ನಡೆದ ಕಾರ್ಯಕ್ರದಲ್ಲಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ಹಸ್ತಾಂತರ ಮಾಡಿದರು.

ನೊಬೆಲ್‌ ಚಿನ್ನದ ಪದಕವು ಈಗ ಟ್ರಂಪ್ ಅವರ ಬಳಿಯೇ ಉಳಿದಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಕಾರ್ಯಕ್ರಮದ ಬಳಿಕ ಮಚಾದೊ ಚಿನ್ನದ ಪದಕವನ್ನು ಬಿಟ್ಟು ಹೋಗಿರುವುದಾಗಿ ವರದಿಗಾರರಿಗೆ ತಿಳಿಸಿದ್ದಾರೆ. ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅವರ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೆರಿಕದ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯ ಪದಕವನ್ನು ಪ್ರದಾನ ಮಾಡಿದ್ದೇನೆ ಮಚಾದೊ ತಿಳಿಸಿದ್ದಾರೆ.

ನೊಬೆಲ್‌ ಪದಕ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿದ ಟ್ರಂಪ್‌, ಇಂದು ವೆನೆಜುವೆಲಾದ ಮರಿಯಾ ಕೊರಿನಾ ಮಚಾದೊ ಅವರನ್ನು ಭೇಟಿಯಾಗುವುದು ನನಗೆ ದೊರೆತ ದೊಡ್ಡ ಗೌರವ. ಅವರು ತುಂಬಾ ಕಷ್ಟಗಳನ್ನು ಅನುಭವಿಸಿದ ಅದ್ಭುತ ಮಹಿಳೆ. ನನ್ನ ಕೆಲಸಕ್ಕೆ ಮರಿಯಾ ಅವರು ತನಗೆ ಸಿಕ್ಕಿದ್ದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನನಗೆ ನೀಡಿದರು. ಧನ್ಯವಾದಗಳು ಮರಿಯಾ! ಎಂದು ಬರೆದುಕೊಂಡಿದ್ದಾರೆ.

ನೊಬೆಲ್‌ ಪ್ರಶಸ್ತಿ ಸಿಕ್ಕಿದ ನಂತರ ಮರಿಯಾ ಅವರು ಈ ಪ್ರಶಸ್ತಿಯನ್ನು ನಾನು ಟ್ರಂಪ್‌ ಅವರಿಗೆ ಅರ್ಪಿಸುವುದಾಗಿ ಅಕ್ಟೋಬರ್‌ 10 ರಂದೇ ಪ್ರಕಟಿಸಿದ್ದರು. ನೊಬೆಲ್‌ ಶಾಂತಿ ಪಾರಿತೋಷಕವು ಎಲ್ಲಾ ವೆನೆಜುವೆಲಾ ಜನರ ಹೋರಾಟಕ್ಕೆ ಸಿಕ್ಕ ಮನ್ನಣೆಯಾಗಿದೆ. ಈ ಪುಸ್ಕಾರವನ್ನ ವೆನೆಜುವೆಲಾದ ದುಃಖಿತ ಜನರು ಹಾಗೂ ಪ್ರಜಾಪ್ರಭುತ್ವಪರ ಚಳವಳಿಗೆ ನಿರ್ಣಾಯಕ ಬೆಂಬಲ ನೀಡಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಅರ್ಪಿಸುವುದಾಗಿ ತಿಳಿಸಿದ್ದರು.

ವೆನೆಜುವೆಲಾದ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಮರಳಿ ಪಡೆಯಲು, ಸರ್ವಾಧಿಕಾರದಿಂದ ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಗಾಗಿ ಹೋರಾಟ ನಡೆಸಿದ್ದಾಗಿ ಮಾರಿಯಾ ಕೊರಿನಾ ಮಚಾದೋ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ನಾರ್ವೆಯ ನೊಬೆಲ್ ಪ್ರಶಸ್ತಿಯ ಆಯ್ಕೆ ಸಮಿತಿ ಹೇಳಿತ್ತು. ನಾನು 8 ಯುದ್ಧಗಳನ್ನು ನಿಲ್ಲಿಸಿದ್ದೇನೆ. ಬರಾಕ್‌ ಒಬಾಮ ಏನು ಮಾಡಿದ್ದಾರೆ? ಏನು ಮಾಡದ ಒಬಾಮಗೆ ನೊಬೆಲ್‌ ಸಿಗುವುದಾದರೆ ನನಗೆ ಯಾಕೆ ಸಿಗಬಾರದು ಎಂದು ಟ್ರಂಪ್‌ ಈ ಹಿಂದೆ ಪ್ರಶ್ನಿಸಿದ್ದರು. ಅಷ್ಟೇ ಅಲ್ಲದೇ ಇಸ್ರೇಲ್‌ ಮತ್ತು ಪಾಕಿಸ್ತಾನ ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರ ಹೆಸರನ್ನು ನಾಮ ನಿರ್ದೇಶನ ಮಾಡಿತ್ತು.

ವಿರೋಧ ಪಕ್ಷದ ನಾಯಕಿಯೂ ಆಗಿರುವ ಮಚಾದೋ ವೆನೆಜುವೆಲಾದ ಪ್ರಜಾಪ್ರಭುತ್ವ ಪರ ಚಳವಳಿಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಮಡುರೊ ಅವರ ಸರ್ವಾಧಿಕಾರಿ ಆಡಳಿತವನ್ನು ಧಿಕ್ಕರಿಸಿ ಹೋರಾಟ ನಡೆಸಿದ್ದರು. ಅವರು ಬೆದರಿಕೆಗಳನ್ನು ಎದುರಿಸಿದ್ದಲ್ಲದೆ, ಬಂಧನಕ್ಕೊಳಗಾಗಿದ್ದಾರೆ. ಪ್ರಯಾಣ ನಿಷೇಧ ಮತ್ತು ರಾಜಕೀಯ ಕಿರುಕುಳವನ್ನು ಎದುರಿಸಿದ್ದರು. ವೆನೆಜುವೆಲಾದಲ್ಲಿ ಅವರನ್ನು ಐರನ್‌ ಲೇಡಿ ಎಂದು ಕರೆಯಲಾಗುತ್ತಿದೆ.