ಮನೆ ರಾಷ್ಟ್ರೀಯ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

0

ನವದೆಹಲಿ(Newdelhi): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅನಾರೋಗ್ಯದಿಂದಾಗಿ ಸೋಮವಾರ ನಗರದ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

63 ವರ್ಷದ ನಿರ್ಮಲಾ ಅನಾರೋಗ್ಯದಿಂದಾಗಿ ಆಸ್ಪತ್ರೆಯ ಖಾಸಗಿ ವಾರ್ಡ್‌’ಗೆ ದಾಖಲಾಗಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾವ ಕಾರಣಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಕೆಲವೊಂದು ವರದಿಯ ಪ್ರಕಾರ ಅವರು ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.