ಮನೆ ರಾಜಕೀಯ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಸೇರಿ 36 ಜನರ ವಿರುದ್ಧ ಎಫ್ ಐಆರ್

ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಸೇರಿ 36 ಜನರ ವಿರುದ್ಧ ಎಫ್ ಐಆರ್

0

ಬೆಂಗಳೂರು:  ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ  ಸೇರಿದಂತೆ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಏಪ್ರಿಲ್ 13ರಂದು ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು.  ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 36 ಜನರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 103 ಐಪಿಸಿ ಸೆಕ್ಷನ್ 341, 143ರ ಅಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಏಪ್ರಿಲ್ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದರು.

ಹಿಂದಿನ ಲೇಖನಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ: ಮುಖ್ಯ ಮಂತ್ರಿ ಬೊಮ್ಮಾಯಿ
ಮುಂದಿನ ಲೇಖನನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ