ಮನೆ ರಾಜ್ಯ ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಕಂದಾಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್: ಪೊಲೀಸರ ಕ್ರಮ...

ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಕಂದಾಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್: ಪೊಲೀಸರ ಕ್ರಮ ವಿರೋಧಿಸಿ ಎಡಿಸಿಗೆ ಮನವಿ ಸಲ್ಲಿಸಿದ ಕಂದಾಯ ಆಡಳಿತ ಅಧಿಕಾರಿಗಳ ಸಂಘ

0

ಮೈಸೂರು: ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಮೈಸೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಮೈಸೂರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Join Our Whatsapp Group

ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ:0063/2024, ದಿನಾಂಕ: 23.05.2024 ರಂದು ಕಂದಾಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ, ಪ್ರಕರಣ ದಾಖಲಿಸುವ ಮುನ್ನ ಸರ್ಕಾರಿ ಸುತ್ತೋಲೆ 114/2017-18ರಂತೆ ಹಿರಿಯ ಅಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆದರೆ ಈ ಮೇಲ್ಕಂಡ ಪ್ರಕರಣದಲ್ಲಿ ನಿಯಮಗಳನ್ನು ಪಾಲಿಸದೇ ಇರುವುದು ಕಂಡು ಬಂದಿದೆ. ಪೊಲೀಸರು ಈ ಪ್ರಕರಣ ಸಂಬಂಧ ಇಲಾಖಾ ಮುಖ್ಯಸ್ಥರು ಅಥವಾ ಮೇಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದರೆ ಪ್ರಕರಣದ ಸತ್ಯಾ ಸತ್ಯತೆ ತಿಳಿದಿರುತ್ತಿತ್ತು ಎಂದು ಮನವಿಯಲ್ಲಿ ಹೇಳಲಾಗಿದೆ.

ಕಂದಾಯ ಇಲಾಖೆ ದಾಖಲೆಗಳ ಬಗ್ಗೆ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ಕೊರತೆ ಇರುವುದು ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹಾಗಾಗಿ ಈ ರೀತಿಯ ಪ್ರಕರಣಗಳಿಂದ ಕಂದಾಯ ಇಲಾಖೆಯಲ್ಲಿ ನೌಕರರು ನಿರ್ಭಿತಿಯಿಂದ ಹಾಗೂ ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಕಷ್ಟಕರವಾಗುತ್ತಿದೆ ಹಾಗೂ ನೌಕರರ ಆತ್ಮಸ್ಥೆರ್ಯ ಕುಗ್ಗಿಸುವಂತಹ ವಾತಾವರಣ ಉಂಟಾಗುತ್ತಿದೆ. ಈ ಸಂಬಂಧ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಮತ್ತು ಈ ರೀತಿಯ ಪ್ರಕರಣಗಳು ನಡೆಯದಂತೆ ಕ್ರಮಕೈಗೊಳ್ಳುವಂತೆ ಎಡಿಸಿ ಶಿವರಾಜ್ ಅವರಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಮನವಿ ಮಾಡಿದ್ದಾರೆ.